ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ಮಾರುಕೇರಿಯಲ್ಲಿ ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಗ್ರಾಹಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟ ಆರೋಪದಡಿ ೬೦ ವರ್ಷದ ಮಹಿಳೆಯೊಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರುಕೇರಿ ನಿವಾಸಿ ಮೋಹಿನಿ ನಾಗಪ್ಪ ಬಾಂದಿ (೬೦) ಪ್ರಕರಣದ ಆರೋಪಿಯಾಗಿದ್ದಾರೆ.

ಪೊಲೀಸ್ ದೂರಿನ ಪ್ರಕಾರ, ಅಕ್ಟೋಬರ್ ೨೫ರಂದು ಸಂಜೆ ೬.೫೦ರ ಸುಮಾರಿಗೆ ಮಾರುಕೇರಿಯಲ್ಲಿರುವ ತಮ್ಮ ಮನೆಯೊಂದಿಗೆ ಹೊಂದಿಕೊಂಡಿರುವ ಅಂಗಡಿಯ ಎದುರು ಸಾರ್ವಜನಿಕ ಸ್ಥಳದಲ್ಲಿ ಪರವಾನಿಗೆ ಪಡೆಯದೆ ಗ್ರಾಹಕರಿಗೆ ಮದ್ಯಪಾನ ಮಾಡಲು ಅವಕಾಶ ನೀಡಲಾಗುತ್ತಿತ್ತು ಎನ್ನಲಾಗಿದೆ.

ಈ ವೇಳೆ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ ೧೫(ಎ) ಮತ್ತು ೩೨(೩)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಭರಮಪ್ಪ ಬೆಳಗಲಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ :

ಭಟ್ಕಳದ ಬೈಲೂರಿನಲ್ಲಿ ಜಾಗದ ವಿಚಾರಕ್ಕೆ ಗಲಾಟೆ: ವೃದ್ಧನ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ

ಭಟ್ಕಳದ ಸಮುದ್ರ ಕಣ್ಣೀರಾಗುತ್ತಿದೆ: ಮೀನುಗಾರರ ಬದುಕಿಗೆ ಸುರಕ್ಷತೆ ಯಾವಾಗ?