ಕಾರವಾರ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ ೫ ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನು ಓದಿ : ಬಿಜೆಪಿ ಮಹಿಳಾ ಮೋರ್ಚಾದಿಂದ ಮೆರವಣಿಗೆ
ಮಾರ್ಚ್ ೫ ರಂದು ಸಂಜೆ ೬ ಗಂಟೆಗೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಬನವಾಸಿಯಲ್ಲಿ ಆಯೋಜಿಸಿರುವ ಕದಂಬೋತ್ಸವ-೨೦೨೪ ಉದ್ಘಾಟನಾ ಕಾರ‍್ಯಕ್ರಮದಲ್ಲಿ ಭಾಗವಹಿಸಿ ನಂತರ ವಾಸ್ತವ್ಯ ಮಾಡಲಿದ್ದಾರೆ.

ಈ ವಿಡಿಯೋ ನೋಡಿ : ತೆಂಗಿನಗುಂಡಿಯಲ್ಲಿ ಮತ್ತೆ ಹಾರಾಡಿದ ಭಗವಾಧ್ವಜ https://fb.watch/qBzaUFAaLL/?mibextid=Nif5oz

ಮಾಚ್ ೬ ರಂದು ಬೆಳಗ್ಗೆ ೧೦ ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.