ಬೈಲಹೊಂಗಲ: ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಳರ್ ಅವರು ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ : ಕಾಗೇರಿ

ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿದ್ದಾಗ ಡಾ.ಅಂಜಲಿಯವರು, ಹುಬ್ಬಳ್ಳಿಯ ಕಾಲೇಜಿನಲ್ಲಿ ಓದುತ್ತಿದ್ದ ನೇಹಾ ಹಿರೇಮಠರ ಫೋಟೊಗೆ ಮೊಂಬತ್ತಿ ಬೆಳಗಿದರು. ಎರಡು ನಿಮಿಷ ಮೌನಾಚರಣೆ ಮಾಡಿ ಆತ್ಮಕ್ಕೆ ಶಾಂತಿ ಕೋರಿದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ರಾಕ್ಷಸೀ ಕೃತ್ಯ. ಈ ಸಂದರ್ಭದಲ್ಲಿ ರಾಜಕೀಯವಾಗಿ ಪ್ರಕರಣವನ್ನ ಬಳಸದೆ ಆ ಕುಟುಂಬಕ್ಕೆ ಸಾಂತ್ವನ ನೀಡಬೇಕಿದೆ. ಆ ಕುಟುಂಬದ ದುಃಖದಲ್ಲಿ ಜೊತೆಯಾಗಬೇಕಿದೆ. ಮಗಳನ್ನ ಕಳೆದುಕೊಂಡ ಕುಟುಂಬದ ನೋವು ಏನೆಂದು ಒಬ್ಬ ತಾಯಿಯಾಗಿ ನಾನು ಬಲ್ಲೆ ಎಂದು ಮೃತ ನೇಹಾಳಿಗೆ ಡಾ.ಅಂಜಲಿ ನಿಂಬಾಳ್ಕರ್ ಶ್ರದ್ಧಾಂಜಲಿ ಅರ್ಪಿಸಿದರು.