ಕಾರವಾರ : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ ಸಂಚರಿಸಲಿವೆ.
ಇದನ್ನೂ ಓದಿ : ನಾಮಪತ್ರ ಸಲ್ಲಿಕೆ ೧೨ರಿಂದ : ೨೨ರವರೆಗೆ ನಿಷೇಧಾಜ್ಞೆ
ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತುಬಾಗಲಕೋಟೆ ವಿಭಾಗಗಳಿಂದ ಸುಮಾರು ೧೮೫ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಏ.೬ ಮತ್ತು ೭ ರಂದು ಕ್ರಮವಾಗಿ ಶನಿವಾರ ಮತ್ತು ಭಾನುವಾರ ವಾರಾಂತ್ಯ ರಜೆ, ಏ.೯ರಂದು ಯುಗಾದಿ ಮತ್ತು ಏ. ೧೧ರಂದು ರಮಜಾನ್ ಹಬ್ಬ ಇವೆ. ಹೀಗಾಗಿ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ : ಚನ್ನಪಟ್ಟಣ ಹನುಮಂತ ದೇವರ ಬ್ರಹ್ಮರಥೋತ್ಸವ ಏ.೧೭ರಂದು
ಬೆಂಗಳೂರಿನಿಂದ ರಾಜ್ಯ/ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಏ.೬ ರಿಂದ ೭ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ಏ.೧೧ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.