ಭಟ್ಕಳ : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ರಾಜ್ಯ ಮಟ್ಟದ ‘ಮೀಡಿಯಾ ಫೆಸ್ಟ್’ನಲ್ಲಿ ತಾಲೂಕಿನ ಶ್ರೀ ಗುರು ಸುಧೀಂದ್ರ ಮಹಾವಿದ್ಯಾಲಯದ ಬಿಎ ಪತ್ರಿಕೋದ್ಯಮ ವಿದ್ಯಾರ್ಥಿಗಳ ತಂಡವು ಬಾನುಲಿಗ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಧಾರವಾಡದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ೪೦ನೇ ವರ್ಷಾಚರಣೆಯ ಪ್ರಯುಕ್ತ ರಾಜ್ಯ ಮಟ್ಟದ ಮೀಡಿಯಾ ಫೆಸ್ಟ್ ಆಯೋಜಿಸಲಾಗಿತ್ತು. ಈ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿಯರಾದ ಮೇಘ ಮತ್ತು ಲಿಡಿಯ ಅವರು ನಕಲಿ ಸುದ್ಧಿ ಮತ್ತು ಅದರ ಪ್ರಭಾವದ ಕುರಿತು ಸಂಶೋಧನಾ ಲೇಖನ ಮಂಡಿಸಿದ್ದರು. ಭಟ್ಕಳ ತಾಲೂಕಿನ ಪತ್ರಕರ್ತರು ಮತ್ತು ಪತ್ರಿಕೋದ್ಯಮ ಪರಿಣಿತರು ವಿದ್ಯಾರ್ಥಿಗಳಿಗೆ ಈ ರಾಜ್ಯಮಟ್ಟದ ಸ್ಪರ್ಧೆಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು.
ಇದನ್ನೂ ಓದಿ : ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಅಕ್ಷರಾಭ್ಯಾಸ
ವಿದ್ಯಾರ್ಥಿಗಳ ಈ ಸಾಧನೆಗೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಜೆ. ಎಮ್ ಚಂದುನವರ, ಸಹ ಪ್ರಾಧ್ಯಾಪಕ ಡಾ. ಸಂಜಯ್ ಕುಮಾರ್ ಎಮ್ ಮಾಲಗತ್ತಿ, ಭಟ್ಕಳ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುರೇಶ ವಿ ನಾಯಕ, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪ-ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.