ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆ ಸನಿಹದಲ್ಲಿದ್ದು, 400 ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ಇದೀಗ ಚುನಾವಣೆ ಘೋಷಣೆಗೂ ಮುನ್ನ ೧೯೫ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ.

ಇದನ್ನೂ ಓದಿ : ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟು : ೫ರಂದು ನಡ್ಡಾ ಬೆಳಗಾವಿಗೆ

ಬಿಜೆಪಿ ನಾಯಕ ವಿನೋದ್‌ ತಾವ್ಡೆ ಮತ್ತಿತರ ನಾಯಕರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ವಿಶೇಷವೆಂದರೆ, ಮುಂಬರುವ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಈ ಪಟ್ಟಿಯಲ್ಲಿ ಕರ್ನಾಟಕದ ಯಾವೊಂದೂ ಕ್ಷೇತ್ರದ ಹೆಸರಿಲ್ಲ.

16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶದ 51 ಕ್ಷೇತ್ರಗಳಿಗೆ, ಪಶ್ಚಿಮ ಬಂಗಾಳ 20, ಮಧ್ಯಪ್ರದೇಶ 24, ಗುಜರಾತ್‌ 15, ರಾಜಸ್ಥಾನ 15, ಕೇರಳ 12, ತೆಲಂಗಾಣ 9, ಅಸ್ಸಾಂ 11, ಜಾರ್ಖಂಡ್‌ 11, ಛತ್ತೀಸ್‌ಗಢ 11, ದೆಹಲಿ 5, ಜಮ್ಮು-ಕಾಶ್ಮೀರ 2, ಉತ್ತರಾಖಂಡ 3, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರ 1, ಅಂಡಮಾನ್‌ ನಿಕೋಬಾರ್‌ 1 ಹಾಗೂ ದಿಯು ಮತ್ತು ದಮನ್‌ನ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ. ಭೂ ವಿಜ್ಞಾನಗಳ ಖಾತೆ ಸಚಿವ ಕಿರಣ್‌ ರಿಜಿಜು, ಸರ್ಬಾನಂದ ಸೋನೋವಾಲ್‌ ಸೇರಿ ಹಲವರು ಟಿಕೆಟ್‌ ಪಡೆದ ಗಣ್ಯರಾಗಿದ್ದಾರೆ. ದೆಹಲಿಯ ಚಾಂದಿನಿ ಚೌಕ್‌ನಿಂದ ಪ್ರವೀಣ್‌ ಕಂಡೇಲ್‌ವಾಲ್‌, ದೆಹಲಿ ಉತ್ತರ ಮನೋಜ್‌ ತಿವಾರಿ ಕಣಕ್ಕಿಳಿದಿದ್ದಾರೆ. ಉತ್ತರ ಗೋವಾದಿಂದ ಶ್ರೀಪಾದ ನಾಯಕ್‌, ಗಾಂಧಿನಗರದಿಂದ ಅಮಿತ್‌ ಶಾ, ಅಹ್ಮದಾಬಾದ್‌ ಪಶ್ಚಿಮ ಕ್ಷೇತ್ರದಿಂದ ದಿನೇಶ್‌ಭಾಯಿ ಮಕ್ವಾನ, ಪೋರ್‌ಬಂದರ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವಿಯ ಅವರಿಗೆ ಟಿಕೆಟ್‌ ನೀಡಲಾಗಿದೆ.
ಕೇರಳದ ಕಾಸರಗೋಡು ಕ್ಷೇತ್ರದಿಂದ ಎಂ.ಎಲ್.ಅಶ್ವಿನಿ, ಸಚಿವ ರಾಜೀವ್‌ ಚಂದ್ರಶೇಖರ್‌ ಅವರಿಗೆ ತಿರುವನಂತಪುರಂನಿಂದ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ವಿದಿಶಾದಿಂದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಉಕ ಜಿಲ್ಲಾ ರೈತ ಮೋರ್ಚಾ ಪದಾಧಿಕಾರಿಗಳ ಪಟ್ಟಿ ಬಿಡುಗಡೆ:  https://m.facebook.com/story.php?story_fbid=pfbid012Bwj1qmSTpTW5ZKHJ3MFDUnY3AdEWNGftadp3maPyNwCdHf5Ytd7mQ4hzQ3g6hdl&id=61555144611326&mibextid=Nif5oz