ಕಾರವಾರ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ದಾಂಡೇಲಿಯ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ೬ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರ ವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ : ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ-ಕಾರ್ಯದರ್ಶಿಗಳ ಪದಗ್ರಹಣ

ವಿಡಿಯೋ ನೋಡಿ :  https://www.facebook.com/share/v/WLPz2sufAnDgBDos/?mibextid=oFDknk

ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ https://sevasindhu.karnataka.gov.in/ಗೆ ಭೇಟಿ ನೀಡಬಹುದು. ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಮತ್ತು ಪ.ಜಾತಿ/ಪ.ಪಂಗಡ, ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ೭೫% ಅಲ್ಪಸಂಖ್ಯಾತರ ಸಮುದಾಯದವರಿಗೆ ಹಾಗೂ ೨೫% ಇತರರಿಗೆ ಪ್ರವೇಶಾತಿ ನೀಡಲಾಗುವುದು.

ವಸತಿ‌ ಶಾಲೆ ಪ್ರವೇಶದ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ: 8277799990 / 08382-220336, ವೆಬ್‌ಸೈಟ್ https://dom.karnataka.gov.in/ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ ನಿಮ್ಮ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.