ಭಟ್ಕಳ: ಇಲ್ಲಿನ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಇಂದು(ಜುಲೈ ೧೨) ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗೆ ದಾಖಲಾದ ಮಕ್ಕಳಿಗೆ ಪ್ರಾರಂಭಿಕ ವಿದ್ಯಾಭ್ಯಾಸದ ಮೊದಲ ಹಂತವಾದ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾ ದೇವತೆಯಾದ ಸರಸ್ವತಿಯ ಉಪಾಸನೆಯೊಂದಿಗೆ ವೇ.ಮೂ. ಪ್ರಮೋದ ಭಟ್ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಿತು. ಸುಮಾರು ೬೦ ವಿದ್ಯಾರ್ಥಿಗಳು ತಮ್ಮ ಪಾಲಕರೊಂದಿಗೆ ಬಂದು ಈ ಮಹೋನ್ನತ ಕಾರ್ಯದಲ್ಲಿ ಭಾಗಿಯಾದರು.

ಇದನ್ನೂ ಓದಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ. ಸುರೇಶ ನಾಯಕ, ಟ್ರಸ್ಟಿಗಳಾದ ಡಾ.ರಾಜೇಶ ನಾಯಕ, ನಾಗೇಶ ಭಟ್, ರಮೇಶ ಖಾರ್ವಿ, ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.