ಯಲ್ಲಾಪುರ : ೨೦೨೩-೨೪ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶ್ವದರ್ಶನ ಪಿಯು ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.
ವಾಣಿಜ್ಯ ಮತ್ತು ವಿಜ್ಞಾನ ವಿಭಾಗ ಸೇರಿದಂತೆ 42 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ : ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ವಿಜ್ಞಾನ ವಿಭಾಗ :
ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ ವಿಷಯ ಸಂಯೋಜನೆಯಲ್ಲಿ ೪೦೦ಕ್ಕೆ ೩೯೩ ಅಂಕ ಗಳಿಸಿ
ಎಚ್ ಎಸ್ ಸಂದೇಶ ಪ್ರಥಮ ಸ್ಥಾನ ಪಡೆದಿದ್ದಾನೆ.
ಗಣಿತಶಾಸ್ತ್ರ ಮತ್ತು ಜೀವವಿಜ್ಞಾನದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾನೆ. ಫರ್ಧಿನ್ ಇಕ್ಬಾಲ್ ಸಯ್ಯದ್ ಹಾಗೂ ವೈಷ್ಣವಿ ದತ್ತಾತ್ರೇಯ ಗಾಂವ್ಕರ್ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ವಾಣಿಜ್ಯ ವಿಭಾಗ :
ವಾಣಿಜ್ಯ ವಿಭಾಗದಲ್ಲಿ ಲಕ್ಷ್ಮೀ ಕೃಷ್ಣ ಪಟಗಾರ ಶೇ.೯೫.೮೩ ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ದೀಕ್ಷಾ ಮಂಜುನಾಥ ಹೆಗಡೆ (೯೫.೫%) ದ್ವಿತೀಯ ಹಾಗೂ ಶ್ರೀಗೌರಿ ಮಹಾಬಲೇಶ್ವರ ಭಟ್ಟ (೯೩.೩%) ಮತ್ತು ವೈಷ್ಣವಿ ಪರಮಾನಂದ ದುಂಡಿ (೯೩.೩%) ತೃತೀಯ ಸ್ಥಾನ ಗಳಿಸಿರುತ್ತಾರೆ .

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡಿದ ಎಲ್ಲ ವಿದ್ಯಾರ್ಥಿಗಳಿಗೆ ವಿಶ್ವದರ್ಶನ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಎಲ್ಲಾ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.