ಭಟ್ಕಳ: ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಯಿತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ ನಾಯ್ಕ, ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೆ ಅವಿಸ್ಮರಣೀಯ ದಿನವಾಗಿದೆ. ಕಾರ್ಯಕರ್ತರ ಪರಿಶ್ರಮದಿಂದ ನಮ್ಮ ಪಕ್ಷದ ಅಭ್ಯರ್ಥಿ ರಾಜ್ಯದಲ್ಲೇ ಅತೀ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಪ್ರಥಮ ಬಾರಿಗೆ ಸಂಸದರಾಗಿ ಗೆಲುವು ಸಾಧಿಸಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ. ಕಾರ್ಯಕರ್ತರ ಪರಿಶ್ರಮದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಗೇರಿಯವರು ಅವಧಿಯಲ್ಲಿ ಅನೇಕ ಕಾರ್ಯಗಳಿಗೆ ಹೆಚ್ಚು ಒತ್ತು ನೀಡುವ ಕೆಲಸ ಮಾಡುತ್ತೇನೆ ಎನ್ನುವ ಭರವಸೆ ನೀಡಿದ್ದಾರೆ. ಅದೇ ರೀತಿ ಭಟ್ಕಳದ ಜನತೆ ೩೩ ಸಾವಿರಕ್ಕೂ ಹೆಚ್ಚು ಮತಗಳ ಅಂತರ ನೀಡಿ ಕಾಗೇರಿಯವರ ಗೆಲುವಿಗೆ ಸಾಕ್ಷಿಯಾಗಿದ್ದಾರೆ. ಇದಕ್ಕೆ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ನರೇಂದ್ರ ಮೋದಿಯವರು ೨ ದಿನಗಳಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದರು.

ಇದನ್ನೂ ಓದಿ : ಜೂನ್‌ ೪ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ

ಲೋಕಸಭಾ ಕ್ಷೇತ್ರದ ಸಂಚಾಲಕ ಗೋವಿಂದ ನಾಯ್ಕ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರವನ್ನು ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ನಮ್ಮ ರಾಜ್ಯದ ಅವಲೋಕನ ಸಭೆಯಲ್ಲಿ ನಾನು ಉಲ್ಲೇಖ ಮಾಡಿದ್ದೆ. ಆ ದೃಷ್ಟಿಯಿಂದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಜನತೆ ಅದಕ್ಕೆ ಸಹಕಾರ ನೀಡಿದ್ದಾರೆ. ಬೂತ್ ಮಟ್ಟದ ಕಾರ್ಯಕರ್ತರಿಂದ ಹಿಡಿದು ಎಲ್ಲಾ ಕಾರ್ಯಕರ್ತರು ಕಳೆದ ೨ ತಿಂಗಳಿನಿಂದ ಹಗಲಿರುಳು ದುಡಿದು ಭಾರತೀಯ ಜನತಾ ಪಾರ್ಟಿಗೆ ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳಿಂದ ನಮ್ಮ ಜಿಲ್ಲೆಯ ಅಭ್ಯರ್ಥಿಯನ್ನು ಗೆಲುವು ಸಾಧಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹೆಚ್ಚು ಮತ ಕೊಡುವಲ್ಲಿ ಭಟ್ಕಳ ಕ್ಷೇತ್ರ ಮತ್ತೊಮ್ಮೆ ಸಾಬೀತು ಮಾಡಿದೆ. ಚುನಾವಣೆಗೆ ಸಹಕಾರ ನೀಡಿದ ಉತ್ತರ ಕನ್ನಡ ಜಿಲ್ಲೆಯ ಜೆ.ಡಿ.ಎಸ್. ಮುಖಂಡರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ : ಸಂತಾಪ ಸೂಚಕ ಸಭೆಯಲ್ಲಿ ಮಾದೇವ ನಾಯ್ಕರ ಗುಣಗಾನ

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಿರುವ ನೋವಿನಿಂದಾಗಿ ಈ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರಿಗೆ ಹಿಂಜರಿಕೆ ಇತ್ತು. ಆದರೆ ನಮ್ಮ ಮಹಿಳಾ ಶಕ್ತಿ ಅತಿ ಉತ್ಸಾಹದಿಂದ ಪ್ರತಿಯೊಂದು ಬೂತ್ ಗೆ ತೆರಳಿದ್ದಾರೆ. ಮಹಿಳಾ ಶಕ್ತಿ ಏನು ಎನ್ನುವುದನ್ನು ಇಡೀ ಜಿಲ್ಲೆಗೆ ತೋರಿಸಿದ್ದೇವೆ. ಮಹಿಳೆಯರ ಗ್ಯಾರಂಟಿ ಯೋಜನೆಯಿಂದ ಪರಿಣಾಮ ಏನಾಗುತ್ತೆ ಎನ್ನುವ ಆತಂಕ ಇಡೀ ರಾಜ್ಯದಲ್ಲಿ ಇತ್ತು. ಆದರೆ ಜಿಲ್ಲೆಯ ಪ್ರಜ್ಞಾವಂತ ಮತದಾರರು ನಮ್ಮ ನಿರೀಕ್ಷೆಗಿಂತ ಹೆಚ್ಚು ನರೇಂದ್ರ ಮೋದಿಯವರ ಬೆನ್ನಿಗೆ ನಿಂತಿದ್ದಾರೆ. ನಮ್ಮ ಅಭ್ಯರ್ಥಿ ಒಳ್ಳೆಯ ಅಂತರದಿಂದ ಗೆಲುವು ಸಾಧಿಸುತ್ತಾರೆ ಎನ್ನುವ ನಂಬಿಕೆ ಇತ್ತು. ಆದರೂ ಕೆಲವೊಂದು ಆತಂಕಗಳಿತ್ತು. ಅದನ್ನೆಲ್ಲ ಮೆಟ್ಟಿ ನಿಂತು ನಮ್ಮ ಅಭ್ಯರ್ಥಿ ಕಾಗೇರಿಯವರ ಗೆಲುವು ಸಾಧಿಸುವಲ್ಲಿ ಶ್ರಮ ಪಟ್ಟ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದನ್ನೂ ಓದಿ : ಬ್ರಹ್ಮಾನಂದ ಸರಸ್ವತಿ ಶ್ರೀಗಳ ಚಾತುರ್ಮಾಸ್ಯ ಜೂನ್ ೨೧ರಿಂದ

ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ ಮಾತನಾಡಿ, ನಾವು ಏನು ನಿರೀಕ್ಷೆ ಇಟ್ಟಿದ್ದೇವೋ ಅದಕ್ಕಿಂತ ಹೆಚ್ಚು ಮತ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ ನಮ್ಮ ಮತದಾರ ಬಂಧುಗಳಿಗೆ ಸಲ್ಲಿಸಬೇಕು. ಕಾಗೇರಿಯವರು ಕೇವಲ ಕಾರ್ಯಕರ್ತನಾಗಿ ತಾನು ಏನು ಮಾಡಬೇಕು ಎನ್ನುವುದನ್ನು ಮಾಡಿ ತೋರಿಸಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸತತ ಪ್ರಯತ್ನ ಮಾಡುತ್ತಾರೆ ಎಂದರು.

ಇದನ್ನೂ ಓದಿ : ಬಸ್ ನಿಲುಗಡೆ ನಾಮಫಲಕ ಉದ್ಘಾಟನೆ

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯ್ಕ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ, ಶ್ರೀಕಾಂತ ನಾಯ್ಕ, ಭಾಸ್ಕರ ದೈಮನೆ, ಭಟ್ಕಳ ತಾಲೂಕು ಪ್ರದಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಸುನೀಲ ಕಾಮತ ಮತ್ತಿತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.