ಶಿರಸಿ: ಪ್ರಧಾನಿ ನರೇಂದ್ರ ಮೋದಿ ಏ.೨೮ರಂದು ಶಿರಸಿಗೆ ಲೋಕಸಭಾ ಚುನಾವಣಾ ಪ್ರಚಾರ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿಯವರು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆಗೆ ಆಗಮಿಸಲಿದ್ದಾರೆ.

ಇದನ್ನೂ ಓದಿ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ಗಂಭೀರ

ಈ ಬಗ್ಗೆ ಶಿರಸಿಯ ದೀನದಯಾಳ ಸಭಾಭವನದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕ್ಷೇತ್ರದ ೮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸುಮಾರು ೧ ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ. ವಿಶ್ವ ಮೆಚ್ಚಿನ ನಾಯಕ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪ್ರಪ್ರಥಮ ಬಾರಿಗೆ ಶಿರಸಿ ನಗರಕ್ಕೆ ಆಗಮಿಸುತ್ತಿದ್ದಾರೆ. ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಳ್ಳಲಾಗುತ್ತಿದೆ. ಎಂದು ಹೇಳಿದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಕಿತ್ತೂರು, ಖಾನಾಪುರ ಒಳಗೊಂಡ ಉತ್ತರಕನ್ನಡ ಈ ಲೋಕಸಭಾ ಕ್ಷೇತ್ರದಿಂದ ಲಕ್ಷ ಕಾರ್ಯಕರ್ತರು ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ. ಏ.28 ರಂದು ಕರ್ನಾಟಕದ ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬಿಜೆಪಿಯ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಬೆಳಿಗ್ಗೆ ೧೧ ಘಂಟೆಗೆ ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ ಎಂದರು.

ಉತ್ತರ ಕನ್ನಡ ಲೋಕಸಭಾ ಬಿಜೆಪಿ ಕ್ಷೇತ್ರದ ವಿಶ್ವೇಶ್ವರ ಅಭ್ಯರ್ಥಿ ಹೆಗಡೆ ಕಾಗೇರಿ ಮೊದಲ ಹಂತದಲ್ಲಿ ಮಠ- ಮಂದಿರಗಳಿಗೆ ಭೇಟಿ ನೀಡಿ, ಸಮುದಾಯದ ಸಭೆ. ಗಣ್ಯರ ಸಭೆ, ಕಿತ್ತೂರು, ಖಾನಾಪುರ ಒಳಗೊಂಡಂತೆ ೮ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಆಗ ಸೇರಿದ್ದ ಕಾರ್ಯಕರ್ತರು ನಮ್ಮ ಅಭ್ಯರ್ಥಿಯು ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಲು ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ೭೯ ಮಹಾಶಕ್ತಿ ಕೇಂದ್ರಗಳಲ್ಲಿ ಪ್ರಚಾರ ಸಭೆ ಪ್ರಾರಂಭಿಸಲಾಗಿದ್ದು, ೪೮ ಮಹಾಶಕ್ತಿ ಕೇಂದ್ರಗಳಲ್ಲಿ ಪ್ರಚಾರ ಸಭೆ ಮುಗಿಸಲಾಗಿದೆ. ಪ್ರತಿಯೊಂದು ಕಡೆಗಳಲ್ಲಿಯೂ ಉತ್ತಮ ಬೆಂಬಲ ದೊರೆಯುತ್ತಿದೆ. ಕ್ಷೇತ್ರದ ೨ ಸಾವಿರ ಬೂತ್‌ಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕೇಂದ್ರ ಸರ್ಕಾರದ ಸಾಧನೆ ತಿಳಿಸುವ ದೃಷ್ಟಿಯಿಂದ ಮನೆ ಮನೆ ಸಂಪರ್ಕ ಮಾಡುತ್ತಿದ್ದಾರೆ. ಎರಡನೆಯ ಹಂತದಲ್ಲಿ ವಿಶೇಷ ಸಂಪರ್ಕ ಅಭಿಯಾನದ ಮೂಲಕ ಪಕ್ಷದ ಪ್ರಣಾಳಿಕೆ, ಅಭ್ಯರ್ಥಿಯ ಮಾದರಿ ಮತಪತ್ರ ಹಿಡಿದು ಮನೆ ಮನೆ ಸಂಪರ್ಕ ಮಾಡುತ್ತೇವೆ ಎಂದರು.

ಜೆಡಿಎಸ್ ಜಿಲ್ಲಾ ಸಂಚಾಲಕ ಉಪೇಂದ್ರ ಪೈ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿ ಅಭ್ಯರ್ಥಿ ಪ್ರಚಂಡ ಬಹುಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿ, ಸುಖಾಸುಮ್ಮನೆ అధిಕಾರ ದುರುಪಯೋಗ ಪಡಿಕೊಳ್ಳುವ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದೆ. ಅದನ್ನು ಕಾನೂನು ಹೋರಾಟದ ಮೂಲಕ ಎದುರಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ, ಪಕ್ಷದ ಪ್ರಮುಖರಾದ ಗೋವಿಂದ ನಾಯ್ಕ ಭಟ್ಕಳ, ಶಿವಾಜಿ ನರಸಾನಿ, ಆರ್.ವಿ.ಹೆಗಡೆ ಚಿಪಗಿ ಇದ್ದರು.