ಭಟ್ಕಳ: ಭಟ್ಕಳ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ವಾರ್ಷಿಕೋತ್ಸವವು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಬಿ ಎಮ್ ಪಾಟೀಲ್ “ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ ಅತೀ ಮುಖ್ಯ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು.
ಮಕ್ಕಳಿಗೆ ಕೃಷಿ ಪಾಠ : ಫೇಸ್ಬುಕ್ ನಲ್ಲಿ ವಿಡಿಯೋ ವರದಿ / ಇನ್ಸ್ಟಾಗ್ರಾಂನಲ್ಲಿ ವಿಡಿಯೋ ವರದಿ
ಮುಖ್ಯ ಅತಿಥಿಯಾಗಿ ಆಗಮಿಸಿದ ಕುಮಟಾದ ಹನುಮಂತ ಬೆಣ್ಣೆ ಪಿ.ಯು ಕಾಲೇಜಿನ ಪ್ರಾಂಶುಪಾಲ ಆರ್.ಎಚ್ ನಾಯ್ಕ ಮಾತನಾಡಿ, “ಸಾಧಕರ ಸಾಧನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡು, ಅದರ ಹಿಂದಿನ ಶ್ರಮವನ್ನು ನಾವು ಪರಿಪಾಲಿಸಿದಾಗ ಯಶಸ್ಸು ಗಳಿಸಲು ಸಾಧ್ಯ” ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟನ ಟ್ರಸ್ಟೀ ಮ್ಯಾನೇಜರ್ ರಾಜೇಶ್ ನಾಯಕ “ವಿದ್ಯಾರ್ಥಿಗಳು ಪದವಿಯ ಮೂರು ವರ್ಷವನ್ನು ಸೂಕ್ತವಾಗಿ ಉಪಯೋಗಿಸಿ, ಕೌಶಲ್ಯವನ್ನು ವೃದ್ಧಿಸಿ ಉದ್ಯೋಗವಂತರಾಗಬೇಕು” ಎಂದು ಹೇಳಿದರು.
ಇದನ್ಮೂ ಓದಿ : ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು !
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಟ್ಕಳ ಎಜುಕೇಶನ್ ಟ್ರಸ್ಟನ ಅಧ್ಯಕ್ಷ ಡಾ. ಸುರೇಶ ನಾಯಕ, “ವಿದ್ಯಾರ್ಥಿಗಳು ಶಿಸ್ತು ಹಾಗೂ ಸಂಯಮವನ್ನು ರೂಢಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು” ತಿಳಿಸಿದರು.
ಇದನ್ನೂ ಓದಿ : ೨ ಕಾಳಜಿ ಕೇಂದ್ರಗಳಲ್ಲಿ ೫೯ ಜನರಿಗೆ ಆಶ್ರಯ
೨೦೨೩-೨೪ನೇ ಸಾಲಿನ ವಿವಿಧ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪಠ್ಯ ಪಠ್ಯೇತರ, ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಶ್ರೀ ಗುರು ಸುಧೀಂದ್ರ ಕಾಲೇಜಿನ ಪ್ರಾಂಶುಪಾಲ ಶ್ರೀನಾಥ ಪೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳನ್ನು ಬಿ.ಕಾಂ ವಿಭಾಗದ ಉಪಪ್ರಾಂಶುಪಾಲ ಪಿ.ಎಸ್. ಹೆಬ್ಬಾರ್ ಹಾಗೂ ಬಿ.ಬಿ.ಎ-ಬಿ.ಎ. ವಿಭಾಗದ ಉಪಪ್ರಾಂಶುಪಾಲ ವಿಶ್ವನಾಥ ಭಟ್ಟ ಪರಿಚಯಿಸಿದರು. ಉಪನ್ಯಾಸಕ ಸುಬ್ರಮ್ಹಣ್ಯ ನಾಯ್ಕ ವಂದಿಸಿದರು. ವಿದ್ಯಾರ್ಥಿನಿಯರಾದ ಶ್ರಿಯಾ ಹಾಗೂ ಅಂಜಲಿ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.
ಇದನ್ನೂ ಓದಿ : ಅಬ್ಬರದ ಮಳೆ ಮುಂದುವರಿಕೆ, ರಾಷ್ಟ್ರೀಯ ಹೆದ್ದಾರಿ ಜಲಾವೃತ