ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ : ರಾಮಮಂದಿರ ತಂದ ಮೋದಿಗೆ ಧನ್ಯವಾದ ಹೇಳಲು ಸುವರ್ಣಾವಕಾಶ: ಕಾಗೇರಿ
ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾದೇವ ಖಾರ್ವಿ ಎಂಬುವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋ ಮಾಡಲು ಇಲ್ಲಿ ಒತ್ತಿ.
ಇಂದು ಬೆಳಿಗ್ಗೆ ೫ ಗಂಟೆಯ ವೇಳೆಗೆ ೪ ಮಂದಿ ಮೀನುಗಾರರು ಈ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.
ಫೇಸ್ಬುಕ್ ನಲ್ಲಿ ರೀಲ್ಸ್ ನೋಡಿ : ಮುಳುಗಿದ ಬೋಟ್
ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ನೋಡಿ : ಮುಳುಗಿದ ಬೋಟ್
ಇಂದು ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಮಳೆ ಪ್ರಾರಂಭಗೊಂಡಿದೆ. ಸಮುದ್ರಕ್ಕೆ ತೆರಳುವವರಿಗೆ ಜಿಲ್ಲಾಡಳಿತ ಈ ಕುರಿತು ಅಲರ್ಟ್ ನೀಡಿದೆ.