ಕುಮಟಾ: ತಾಲೂಕಿನ ಹಿರೇಗುತ್ತಿಯ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ೨೦೨೩-೨೪ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ. ೯೪.೨೩ ದಾಖಲಿಸಿದೆ.

ಇದನ್ನೂ ಓದಿ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಮಟಾ ತಾಲೂಕಿಗೆ ಶೇ.೯೩.೦೭ ಫಲಿತಾಂಶ

ಸುವರ್ಣ ಮಂಜುನಾಥ ಭಂಡಾರಕರ್ ಪ್ರಥಮ (೯೧.೫೨%), ದ್ವಿತೀಯ ರಕ್ಷಿತಾ ಸುರೇಶ ಗೌಡ (೮೬.೮೮%), ತೃತೀಯ ದರ್ಶನ ಗಣಪತಿ ಹಳ್ಳೇರ (೮೫.೯೨%) ಪಡೆದಿದ್ದಾರೆ. ೧೦೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ೯೮ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ೧೧ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ.

ಇದನ್ನೂ ಓದಿ : ವರ್ಧಂತಿ ಉತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ ೧೧ರಿಂದ

ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲ್ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಈ ಶೈಕ್ಷಣಿಕ ಸಾಧನೆಗೆ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್. ನಾಯಕ, ಆಡಳಿತ ಕಮಿಟಿಯ ಉಪಾಧ್ಯಕ್ಷ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಬಿ ಕೆರೆಮನೆ ಹಾಗೂ ಸರ್ವ ಸದಸ್ಯರು, ಗ್ರಾಮ ಪಂಚಾಯತ ಅಧ್ಯಕ್ಷೆ ಶಾಂತಾ ಎನ್ ನಾಯಕ, ಮಾದನಗೇರಿಯ ಶ್ರೀ ಮಹಾಲಸಾ ಸಿದ್ಧಿ ವಿನಾಯಕ ಟೆಂಪಲ್ ಟ್ರಸ್ಟ್ ಧರ್ಮದರ್ಶಿ ಸುನೀಲ್ ಪೈ, ಮುಖ್ಯಾಧ್ಯಾಪಕ ರೋಹಿದಾಸ ಎಸ್ ಗಾಂವಕರ, ಶಿಕ್ಷಕ/ಶಿಕ್ಷಕೇತರ ವೃಂದ ಹಾಗೂ ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರು/ ಸದಸ್ಯರು, ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.