ಕಾರವಾರ : ಭಾನುವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಹೊನ್ನಾವರ ತಾಲ್ಲೂಕಿನಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ಆಶ್ರಯ ಪಡೆದಿದ್ದಾರೆ. ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಸದ್ಯ ಹೊನ್ನಾವರ ತಾಲೂಕಿನಲ್ಲಿ ಮಾತ್ರ ೨ ಕಾಳಜಿ ಕೇಂದ್ರಗಳಲ್ಲಿ ೫೯ ಮಂದಿ ಆಶ್ರಯ ಪಡೆದಿದ್ದಾರೆ. ಹೊನ್ನಾವರ ತಾಲ್ಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯ ಗುಂದ, ಚಿಟ್ಟಿಹಿತ್ಲ, ದೇವದಳ್ಳಿಯ ನೇರಪೀಡಿತ ಪ್ರದೇಶದಲ್ಲಿ ೧೩ ಕುಟುಂಬಗಳನ್ನು ಎನ್.ಡಿ.ಆರ್.ಎಫ್. ತಂಡದ ಮೂಲಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬ0ಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.
ಇದನ್ನೂ ಓದಿ : ಅಬ್ಬರದ ಮಳೆ ಮುಂದುವರಿಕೆ, ರಾಷ್ಟ್ರೀಯ ಹೆದ್ದಾರಿ ಜಲಾವೃತ
ಶಾಲಾ-ಕಾಲೇಜುಗಳಿಗೆ ರಜೆ :
ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ ೮ರಂದು ರಜೆ ಘೋಷಿಸಲಾಗಿದೆ.
ಇದನ್ನೂ ಓದಿ : ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಸೇವಿಸುತ್ತಿದ್ದವನ ವಿರುದ್ಧ ಪ್ರಕರಣ
ಮನೆಗಳಿಗೆ ಹಾನಿ :
ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳಲ್ಲಿ ೩ ಮನೆಗಳಿಗೆ ತೀವ್ರ ಹಾನಿ ಹಾಗೂ ೪ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ ೧೦೭೭ ಗೆ ಅಥವಾ ಮೊ.ಸಂ. ೯೪೮೩೫೧೧೦೧೫ ಗೆ ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಅಥವಾ ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಇದನ್ನೂ ಓದಿ : ಕಾಲು ಜಾರಿ ಬಿದ್ದು ಕೃಷಿಕ ಸಾವು